Genesis 19:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
Kannada BSI Bible 2016
ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.
Kannada Bible (KNCL) BSI 2016
ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.