Genesis 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
Kannada BSI Bible 2016
ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
Kannada Bible (KNCL) BSI 2016
ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.