Genesis 19:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
Kannada BSI Bible 2016
ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
Kannada Bible (KNCL) BSI 2016
ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.