Genesis 19:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
Kannada BSI Bible 2016
ಸೊದೋಮ್‌ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.
Kannada Bible (KNCL) BSI 2016
ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.