Genesis 19:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
Kannada BSI Bible 2016
ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
Kannada Bible (KNCL) BSI 2016
ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.