Genesis 19:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Kannada BSI Bible 2016
ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡಕೊಳ್ಳೋಣ ಎಂದು ಹೇಳಿದಳು.
Kannada Bible (KNCL) BSI 2016
ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.