Genesis 19:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
Kannada BSI Bible 2016
ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
Kannada Bible (KNCL) BSI 2016
ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಹಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿಕೊಂಡಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.