Genesis 19:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Kannada BSI Bible 2016
ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರಣೇ ದಿನ ಹಿರಿಯವಳು ಕಿರಿಯವಳಿಗೆ - ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ ಎಂದು ಹೇಳಿದಳು.
Kannada Bible (KNCL) BSI 2016
ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.