Genesis 19:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.
Kannada BSI Bible 2016
ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿರೀ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ ಬೆನವ್ಮಿು ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲ ಪುರುಷನು.
Kannada Bible (KNCL) BSI 2016
ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.