Genesis 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
Kannada BSI Bible 2016
ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.
Kannada Bible (KNCL) BSI 2016
ಅಲ್ಲದೆ ಲೋಟನಿಗೆ, \ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.
Recommended Reading