Genesis 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.
Kannada BSI Bible 2016
ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು -
Kannada Bible (KNCL) BSI 2016
ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.