Genesis 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
Kannada BSI Bible 2016
ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತ್ತು. ಅದು ಆಚೇ ಕಡೆಯಲ್ಲಿ ಒಡೆದು ನಾಲ್ಕು ಶಾಖೆಗಳಾಯಿತು.
Kannada Bible (KNCL) BSI 2016
ಏದೆನ್ ಪ್ರದೇಶದಲ್ಲಿ ಒಂದು ನದಿ ಹುಟ್ಟಿ ಆ ವನಕ್ಕೆ ನೀರೆರೆಯುತ್ತಿತ್ತು. ಅದು ಅಲ್ಲಿಂದ ಹರಿದು ಆಚೆಕಡೆ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.