Genesis 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
Kannada BSI Bible 2016
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವದೇವರು ಆ ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
Kannada Bible (KNCL) BSI 2016
ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.