Genesis 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
Kannada BSI Bible 2016
ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.
Kannada Bible (KNCL) BSI 2016
ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.