Genesis 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
Kannada BSI Bible 2016
ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿ - ಇವುಗಳಿಗೆ ಆ ಮನುಷ್ಯನು ಏನೇನು ಹೆಸರಿಡುವನು ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಹೆಸರಾಯಿತು.
Kannada Bible (KNCL) BSI 2016
ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.