Genesis 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
Kannada BSI Bible 2016
ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡು ಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಬೀಳುವ ಸಹಕಾರಿ ಕಾಣಿಸಲಿಲ್ಲ.
Kannada Bible (KNCL) BSI 2016
ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.