Genesis 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
Kannada BSI Bible 2016
ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಯೆಹೋವದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿ
Kannada Bible (KNCL) BSI 2016
ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.