Genesis 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಮನುಷ್ಯನ ಪಕ್ಕೆಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಅವಳನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
Kannada BSI Bible 2016
ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಮನುಷ್ಯನಿಂದ ತೆಗೆದಿದ್ದ ಎಲುಬನ್ನು ಸ್ತ್ರೀಯಾಗ ಮಾಡಿ ಆಕೆಯನ್ನು ಅವನ ಬಳಿಗೆ ಕರತಂದನು.
Kannada Bible (KNCL) BSI 2016
ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.