Genesis 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
Kannada BSI Bible 2016
ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.
Kannada Bible (KNCL) BSI 2016
ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”