Genesis 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
Kannada BSI Bible 2016
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದನು.
Kannada Bible (KNCL) BSI 2016
ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.