Genesis 20:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.
Kannada BSI Bible 2016
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.
Kannada Bible (KNCL) BSI 2016
ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.