Genesis 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
Kannada BSI Bible 2016
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.
Kannada Bible (KNCL) BSI 2016
ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.