Genesis 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು”‘ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
Kannada BSI Bible 2016
ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.
Kannada Bible (KNCL) BSI 2016
ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.