Genesis 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
Kannada BSI Bible 2016
ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
Kannada Bible (KNCL) BSI 2016
ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.