Genesis 20:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
Kannada BSI Bible 2016
ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿದನಾದ್ದರಿಂದ ಗೆರಾರಿನ ಅರಸನಾದ ಅಬೀಮೆಲೆಕನು ಕರೇಕಳುಹಿಸಿ ಆಕೆಯನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡನು.
Kannada Bible (KNCL) BSI 2016
ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.