Genesis 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
Kannada BSI Bible 2016
ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.
Kannada Bible (KNCL) BSI 2016
ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.