Genesis 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
Kannada BSI Bible 2016
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯನಾಗಬಾರದು ಎಂದು ಹೇಳಿದಳು.
Kannada Bible (KNCL) BSI 2016
ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.