Genesis 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
Kannada BSI Bible 2016
ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
Kannada Bible (KNCL) BSI 2016
ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.