Genesis 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
Kannada BSI Bible 2016
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.
Kannada Bible (KNCL) BSI 2016
ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.