Genesis 21:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
Kannada BSI Bible 2016
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;
Kannada Bible (KNCL) BSI 2016
ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.