Genesis 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
Kannada BSI Bible 2016
ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು.
Kannada Bible (KNCL) BSI 2016
ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.