Genesis 21:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
Kannada BSI Bible 2016
ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -
Kannada Bible (KNCL) BSI 2016
ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.