Genesis 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
Kannada BSI Bible 2016
ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಬ್ರಹಾಮನು ಅಬೀಮೆಲೆಕನಿಗೆ ಕುರಿದನಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರೂ ಒಡಂಬಡಿಕೆಮಾಡಿಕೊಂಡರು.
Kannada Bible (KNCL) BSI 2016
ಆಗ ಅಬ್ರಹಾಮನು ಅಬೀಮೆಲೆಕನಿಗೆ ದನಕುರಿಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರು ಒಂದು ಒಪ್ಪಂದ ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.