Genesis 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
Kannada BSI Bible 2016
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಐಗುಪ್ತ್ಯಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ ಮಗನು ನಗುವದನ್ನು ಸಾರಳು ಕಂಡು ಅಬ್ರಹಾಮನಿಗೆ -
Kannada Bible (KNCL) BSI 2016
ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,