Genesis 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
Kannada BSI Bible 2016
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.
Kannada Bible (KNCL) BSI 2016
ಆದರೆ ಸರ್ವೇಶ್ವರನ ದೂತನು ಆಕಾಶದಿಂದ, \ಅಬ್ರಹಾಮನೇ, ಹೇ ಅಬ್ರಹಾಮನೇ\ ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.