Genesis 22:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
Kannada BSI Bible 2016
ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.
Kannada Bible (KNCL) BSI 2016
ದೂತನು ಅವನಿಗೆ, \ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.