Genesis 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
Kannada BSI Bible 2016
ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ತಿರಿಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
Kannada Bible (KNCL) BSI 2016
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.