Genesis 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
Kannada BSI Bible 2016
ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಾದ ಮೇಲೆ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ವಿುಲ್ಕಳಲ್ಲಿ ಮಕ್ಕಳು ಹುಟ್ಟಿದರೆಂದು ವರ್ತಮಾನವನ್ನು ಕೇಳಿದನು.
Kannada Bible (KNCL) BSI 2016
ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲ ಸಮಯದ ನಂತರ ಕೆಲವರು ಅಬ್ರಹಾಮನಿಗೆ, “ಮಿಲ್ಕಾಳು ತಾಯಾಗಿದ್ದಾಳೆ. ನಿನ್ನ ಸಹೋದರ ನಾಹೋರನಿಗೆ ಅವಳು ಮಕ್ಕಳನ್ನು ಹೆತ್ತಿದ್ದಾಳೆ,” ಎಂದು ತಿಳಿಸಿದರು.