Genesis 22:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
Kannada BSI Bible 2016
ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ - ಅಪ್ಪಾ ಎಂದು ಕರೆಯಲು ಅಬ್ರಹಾಮನು - ಏನು ಮಗನೇ ಅಂದನು. ಇಸಾಕನು - ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು -
Kannada Bible (KNCL) BSI 2016
ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.