Genesis 22:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
Kannada BSI Bible 2016
ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.
Kannada Bible (KNCL) BSI 2016
ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.