Genesis 23:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
Kannada BSI Bible 2016
ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರಲ್ಲಿ ಎಫ್ರೋನನೇ ಅಲ್ಲಿ ಹಿತ್ತಿಯರ ನಡುವೆ ಕೂತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ -
Kannada Bible (KNCL) BSI 2016
ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,