Genesis 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
Kannada BSI Bible 2016
ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು
Kannada Bible (KNCL) BSI 2016
“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.