Genesis 23:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.
Kannada BSI Bible 2016
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.
Kannada Bible (KNCL) BSI 2016
ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.