Genesis 23:15 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
Kannada BSI Bible 2016
ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.