Genesis 23:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
Kannada BSI Bible 2016
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
Kannada Bible (KNCL) BSI 2016
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.