Genesis 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
Kannada BSI Bible 2016
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
Kannada Bible (KNCL) BSI 2016
ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.