Genesis 23:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
Kannada BSI Bible 2016
ಸಾರಳು ಕಾನಾನ್‌ ದೇಶದಲ್ಲಿರುವ ಹೆಬ್ರೋನ್‌ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.
Kannada Bible (KNCL) BSI 2016
ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.