Genesis 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
Kannada BSI Bible 2016
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.
Kannada Bible (KNCL) BSI 2016
“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.