Genesis 23:6 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
Kannada BSI Bible 2016
ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.