Genesis 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
Kannada BSI Bible 2016
ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವದು ನಿಮಗೆ ಒಪ್ಪಿಗೆಯಾಗಿದ್ದರೆ ಒಂದು ವಿಜ್ಞಾಪನೆಯುಂಟು. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿ
Kannada Bible (KNCL) BSI 2016
ಅವರೊಡನೆ ಮಾತನ್ನು ಮುಂದುವರಿಸುತ್ತಾ ಅವನು, “ನನ್ನ ಪತ್ನಿಯ ಶವವನ್ನು ಇಲ್ಲಿ ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾದರೆ ನನ್ನ ವಿಜ್ಞಾಪನೆ ಇದು: ನೀವು ಜೋಹರನ ಮಗನಾದ ಎಫ್ರೋನನ ಸಂಗಡ ನನ್ನ ಪರವಾಗಿ ಮಾತಾಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.